
ಹಾಸನ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರನಿಗೆ ಇಬ್ಬರು ಮಕ್ಕಳು ಇದ್ದಾರೆ. ಅತ್ತೆ-ಸೊಸೆ ಜಗಳದಿಂದಾಗಿ ತೀವ್ರವಾಗಿ ಮನನೊಂದಿದ್ದ ಎನ್ನಲಾಗಿದೆ.
ಇದೇ ಕಾರಣಕ್ಕೆ ಇಂದು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಯಸಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.