ಉತ್ತರಪ್ರದೇಶದ ರಾಂಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿರಾಯ ಖಾಸಗಿ ಅಂಗಕ್ಕೆ ಹೊಲಿಗೆ ಹಾಕಿ ವಿಕೃತಿ ಮೆರೆದಿದ್ದಾನೆ.
ರಾಂಪುರ ನಿವಾಸಿಗಳಾಗಿರುವ ದಂಪತಿಯ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ತನ್ನ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಪತಿ ಅನುಮಾನದಿಂದ ದಿನ ಜಗಳವಾಡುತ್ತಿದ್ದ ಎನ್ನಲಾಗಿದೆ.
ಇದೇ ವಿಚಾರ ಜಗಳ ವಿಕೋಪಕ್ಕೆ ತಿರುಗಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಆಕೆ ಮೇಲೆ ತೀವ್ರವಾಗಿ ಹಲ್ಲೆ ಮಾಡಿ ಬಾಯಿಗೆ ಬಟ್ಟೆ ತುರುಕಿದ್ದಾನೆ. ಅಲ್ಲದೆ ಖಾಸಗಿ ಅಂಗಕ್ಕೆ ಹೊಲಿಗೆ ಹಾಕಿದ್ದಾನೆ. ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಪರಾರಿಯಾಗಿದ್ದಾನೆ.
ಬಳಿಕ ಬಾಯಿಗೆ ತುರುಕಿದ ಬಟ್ಟೆಯನ್ನು ತೆಗೆದ ಮಹಿಳೆ ನೆರವಿಗೆ ಕಿರುಚಾಡಿದ್ದು, ಅಕ್ಕಪಕ್ಕದವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದು ಮಹಿಳೆಯ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.