ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ದ್ವಾರದ ಮುಂಭಾಗದಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 40ಕ್ಕೂ ಅಧಿಕ ಅಪರಿಚಿತರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.
ಶಶಾಂಕ್ ಗುಪ್ತಾ, ಶಿವಾಂಕ್ ಗುಪ್ತಾ ಮತ್ತು ಮುಕೇಶ್ ಗುಪ್ತಾ ಬಂಧನಕ್ಕೊಳಗಾಗಿದ್ದವರಾಗಿದ್ದು, ಇವರುಗಳು ಆರ್ ಎಸ್ ಎಸ್ ಕಚೇರಿ ಮುಂದೆ ಮೂತ್ರ ವಿಸರ್ಜನೆ ಮಾಡುವ ವೇಳೆ ಕಾರ್ಯಕರ್ತರು ಅವರನ್ನು ತಡೆದಿದ್ದಾರೆ.
ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳ ಬೆಂಬಲಕ್ಕೆ ಆಗಮಿಸಿದ 50 ಕ್ಕೂ ಅಧಿಕ ಮಂದಿ ಇಟ್ಟಿಗೆ ತೂರಾಟ ನಡೆಸಿದ್ದಾರೆ. ಜೊತೆಗೆ ಗುಂಡು ಹಾರಿಸಿದ ಘಟನೆಯೂ ನಡೆದಿದೆ ಎನ್ನಲಾಗಿದ್ದು, ಕೆಲ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಕಲ್ಲು ತೂರಾಟದಿಂದ ಸಣ್ಣಪುಟ್ಟ ಗಾಯಗಳಾಗಿದೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 40ಕ್ಕೂ ಅಧಿಕ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಅವರುಗಳ ಬಂಧನಕ್ಕೆ ಮುಂದಾಗಿದ್ದಾರೆ.