ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆ ಬಳಿಕ ಚಿತ್ರದಲ್ಲಿನ ಮಾನವೀಯ ಮೌಲ್ಯಗಳನ್ನು ಪರಿಗಣಿಸಿ ತೆರಿಗೆ ವಿನಾಯಿತಿಯನ್ನು ಘೋಷಿಸಲಾಗಿದೆ.
ಇದರ ಮಧ್ಯೆ ಡಾನ್ಸರ್ ಒಬ್ಬರು ತಮ್ಮ ನೆಚ್ಚಿನ ನಾಯಿ ಜೊತೆ ಚಿತ್ರಮಂದಿರದಲ್ಲಿ ‘777 ಚಾರ್ಲಿ’ ಚಿತ್ರವನ್ನು ವೀಕ್ಷಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂಥದೊಂದು ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿಯ ಶಿವ ಚಿತ್ರಮಂದಿರದಲ್ಲಿ ‘777 ಚಾರ್ಲಿ’ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಡಾನ್ಸರ್ ಸುಭಾಷ್ ನವರು ತಮ್ಮ ನಾಯಿಯೊಂದಿಗೆ ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಮೊದಲಿಗೆ ಚಿತ್ರಮಂದಿರದ ಮಾಲೀಕರು ಇದಕ್ಕೆ ಒಪ್ಪಿಕೊಂಡಿಲ್ಲವಾದರೂ ಬಳಿಕ ಸಿಬ್ಬಂದಿಯ ವೈಯಕ್ತಿಕ ಕ್ಯಾಬಿನ್ ನಲ್ಲಿ ಚಿತ್ರ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.