ಬೆಂಗಳೂರು: ರಾಜ್ಯದಿಂದ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಕರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಹಾಯಧನ ಪ್ರಕಟಿಸಿದೆ. ಅಲ್ಲದೇ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಾನಸ ಸರೋವರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 30 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ಚಾರ್ ಧಾಮ್ ಯಾತ್ರಾರ್ಥಿಗಳಿಗಳಿಗೆ ತಲಾ 20 ಸಾವಿರ, ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಕರಿಗೆ ತಲಾ 5 ಸಾವಿರ ಸಹಾಯಧನ ಪಾವತಿಸಲು ಸರ್ಕಾರ ಸೂಚಿಸಿದೆ.
ಇದೇ ವೇಳೆ ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳು ಸಹಾಯಧನಕ್ಕಾಗಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ರಾಜ್ಯ ಮುಜರಾಯಿ ಇಲಾಖೆ ಪ್ರಕಟಿಸಿದೆ.
* ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಸಹಾಯಧನ ಪಡೆದುಕೊಲ್ಳಬಹುದು.
* ಸಹಾಯಧನ ಪಡೆಯಲು ಇಚ್ಛಿಸುವವರು ಆಯಾ ಆರ್ಥಿಕ ಸಾಲಿನಲ್ಲಿ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ನಿಗದಿಪಡಿಸಿದ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. 25 ರೂಪಾಯಿ ಪಾವತಿಸಿ ವೆಬ್ ಸೈಟ್ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
* ಯಾತ್ರೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲುಸುವ ಮತ್ತು ಸದರಿ ಅರ್ಜಿಯ ಬಗ್ಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ತಗುಲುವ ಸಂಪೂರ್ಣ ವೆಚ್ಚ ಹಾಗೂ ಚೀನಾ ದೇಶಕ್ಕೆ ಪಾವತಿಸಬೇಕಾದ ಮೊತ್ತವನ್ನು ಸಂಬಂಧಪಟ್ಟ ಯಾತ್ರಾರ್ಥಿಗಳೇ ಭರಿಸಬೇಕು.