
ಬೆಂಗಳೂರು: ನೀರು ಕುಡಿದ ನಂತರ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನೀರಿನ ಬಾಟಲಿ ಮಾರಾಟ ಮಾಡುವ ಮಳಿಗೆಗಳೇ ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಾಟಲಿಯ ಮೂಲಕ ಕುಡಿಯುವ ನೀರು ಮಾರಾಟ ಮಾಡುವ ಕಂಪನಿಗಳಿಗೆ ಪ್ಲಾಸ್ಟಿಕ್ ಬಾಟಲಿಗೆ ವೈಜ್ಞಾನಿಕ ವಿಲೇವಾರಿ ಜವಾಬ್ದಾರಿ ಇರುತ್ತದೆ. ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿ ಹಾವಳಿ ತಡೆಯಲು ಸಾಧ್ಯವಾಗಲಿದೆ. ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್ ಬಾಟಲಿಗಳ ಮೇಲೆ ನಿಯಂತ್ರಣ ಹೇರಲು ಗಂಭೀರ ಚಿಂತನೆ ನಡೆಸಿದ್ದು, ಇದಕ್ಕಾಗಿ ನೀರಿನ ಬಾಟಲಿ ಮಾರಾಟ ಸಂಸ್ಥೆಗಳೇ ಮರು ಖರೀದಿಗೆ ನಿಯಮ ರೂಪಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.