ಮಂಡ್ಯ: ಬೊಲೆರೋ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕುಣಿಗಲ್ ಹಳ್ಳದ ಬಳಿ ಈ ಅಪಘಾತ ಸಂಭವಿಸಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಹೋಗುತ್ತಿದ್ದ ಸ್ಕೂಟರ್ ಗೆ ಬೊಲೆರೋ ವಾಹನ ಡಿಕ್ಕಿಯಾಗಿದೆ. ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದಾರೆ. 39 ವರ್ಷದ ಶಿಲ್ಪಾ ಮೃತ ಮಹಿಳೆ. 7 ವರ್ಷದ ಹಾಗೂ 5 ವರ್ಷದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಮಕ್ಕಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.