ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ.
ನಾಗೇಶ್(45) ಕೊಲೆಯಾದ ವ್ಯಕ್ತಿ. ಆತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಆರೋಪಿ ನಾಗೇಶ್ ನನ್ನು ಶಿವಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಕರೆದುಕೊಂಡು ಬಂದು ಕಂಠಪೂರ್ತಿ ಮದ್ಯ ಕುಡಿಸಿ ಕೊಲೆ ಮಾಡಿದ್ದಾನೆ.
ಕೊಲೆಯಾದ ನಾಗೇಶ್ ಮುದುಗಂದೂರು ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿ ನಾಗೇಶ್ ಹುಚ್ಚೇಗೌಡನ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದಾನೆ. 20 ವರ್ಷಗಳಿಂದ ಬೆಂಗಳೂರಿನ ನಾಗಸಂದ್ರದಲ್ಲಿ ವಾಸವಾಗಿದ್ದರು. ಒಂದೇ ಏರಿಯಾದಲ್ಲಿ ಸಡಕಂದಿರು ಮನೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.