alex Certify BIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ

ಮಂಡ್ಯ: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಹೊತ್ತಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಕ್ಟರಿ ಆವರಿಸಿದೆ.

ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...