alex Certify BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಖಾಸಗಿ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಪ್ರಯಾಣಿಕರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆರೆಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...