ಬೆಂಗಳೂರು: ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹರಳಹಳ್ಳಿ ವಿಶ್ವನಾಥ್ ಎಂಬುವವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ಬ್ಯಾಂಕ್ ಅಧಿಕಾರಿಗಳು ಬೀಗ ಜಡಿದಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಬಳಿಯ ಕೇಂಬ್ರಿಡ್ಜ್ ಸ್ಕೂಲ್ & ಕಾಲೇಜಿಗೆ ಬ್ಯಾಂಕ್ ಅಧಿಕಾರಿಗಳು ದಿಢೀರ್ ಬೀಗ ಜಡಿದಿದ್ದಾರೆ. ಇದರಿಂದಾಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದೆರೆಯಾಗಿದ್ದು, ಮಕ್ಕಳ ಭವಿಷ್ಯ ಅತಂತ್ರವಾಗಿದೆ.
ಇದ್ದಕ್ಕಿದ್ದಂತೆ ಶಾಲೆ ಸಿಬ್ಬಂದಿ ಮಕ್ಕಳನ್ನು ಮನೆಗೆವ್ ಕರೆದುಕೊಂಡು ಹೋಗುವಂತೆ ಮೆಸೇಜ್ ಮಾಡಿದ್ದಾರೆ. ಶಾಲೆಗೆ ಬಂದು ನೋಡುವಷ್ಟರಲ್ಲಿ ಶಾಲೆಗೆ ಬೀಗ ಹಾಕಿದೆ. ಸಾಲ ಮರುಪಾವತಿ ಮಾಡದ್ದಕ್ಕೆ ಶಾಲೆಗೆ ಬೀಗ ಹಾಕಲಾಗಿದೆ ಎನ್ನುತ್ತಿದ್ದಾರೆ. ಮಕ್ಕಳ ಪೀಸ್ ಕಟ್ಟಿಯಾಗಿದೆ. ಈಗ ಏಕಾಏಕಿ ಶಾಲೆಗೆ ಬೀಗ ಹಾಕಿದರೆ ಹೇಗೆ? ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಒಂದು ವಾರದಿಂದ ಶಾಲೆ ಬಾಗಿಲು ತೆರೆದಿಲ್ಲ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಬೀಗ ಹಾಕಿದರೂ ತರಗತಿ ನಡೆಸಲಾಗುತ್ತಿದೆ. ಹೀಗೆ ಮುಂದುವರೆದರೆ ನಾಳೆಯಿಂದ ಶಾಲೆ ಮುಂದೆ ಪೋಷಕರೆಲ್ಲರೂ ಧರಣಿ ಮಾಡುವುದಾಗಿ ಎಚ್ಚರಿಸಿದ್ದಾರೆ.