ಮಂಡ್ಯ: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಾಲಕ ಗಾಯಗೊಂಡಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ತಾಲೂಕಿನ ಚಿಕ್ಕಮಂಡ್ಯದಲ್ಲಿ ಘಟನೆ ನಡೆದಿದೆ. ಎತ್ತಿನ ಗಾಡಿ ಓಟದ ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಗಾಡಿ ಹರಿದು ಅವಘಡ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು. ಎತ್ತಿನ ಗಾಡಿ ಚಕ್ರಕ್ಕೆ ಸಿಲುಕಿ ಕೀಳಾರ ಗ್ರಾಮದ ನಾಗರಾಜು(42) ಮೃತಪಟ್ಟಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.