
ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಗೋಪಾಲಯ್ಯ ಕಾರ್ಯನಿರ್ವಹಿಸುತ್ತಿದ್ದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೋಪಾಲಯ್ಯ ಅವರನ್ನು ಮುಂದುವರೆಸಲಾಗಿದೆ. ಮಂಡ್ಯ ಜಿಲ್ಲೆಗೆ ಆರ್. ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.