
ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿಯಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ.
ಮಹೇಶ್ ಎಂಬುವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಕೆಆರ್ ಪೇಟೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.