
ಮಂಡ್ಯ: ಚುನಾವಣೆಯ ಖರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಜನ ಧನಸಹಾಯ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಸಮಾವೇಶದಲ್ಲಿ ಜನರೇ ಕುಮಾರಸ್ವಾಮಿಗೆ ಧನ ಸಹಾಯ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದು, ಮದ್ದೂರಿನಲ್ಲಿ 10ಕ್ಕೂ ಹೆಚ್ಚು ಜನರು ಚುನಾವಣೆ ಖರ್ಚಿಗೆ ಹಣ ನೀಡಿದ್ದು, 4 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ.
ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಚಿವ ನಾರಾಯಣಗೌಡ, ಮಂಡ್ಯದಲ್ಲಿ ಕುಮಾರಸ್ವಾಮಿಯವರು ಅಭ್ಯರ್ಥಿಯಾಗಿರುವುದು ಅದೃಷ್ಟ ಹಾಗೂ ಹೆಮ್ಮೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯವರನ್ನು ಗೆಲ್ಲಿಸಿದರೆ ಕೇಂದ್ರ ಮಂತ್ರಿ ಆಗುತ್ತಾರೆ. ಮೋದಿಯವರ ಸಂಪುಟದಲ್ಲಿ ಕುಮಾರಸ್ವಾಮಿ ಮಂತ್ರಿ ಆಗುತ್ತಾರೆ. ನಾಲ್ಕು ಲಕ್ಷ ಅಂತರದಲ್ಲಿ ಕುಮಾರಸ್ವಾಮಿಯವರನ್ನು ಗೆಲ್ಲಿಸಿ ಎಂದು ಸಮಾವೇಶದಲ್ಲಿ ಜನರಿಗೆ ಕರೆ ಕೊಟ್ಟಿದ್ದಾರೆ.