ಮಂಡ್ಯ: ಸ್ನೇಹಿತನನ್ನು ರಕ್ಷಿಸಲು ಹೋಗಿ ಮೂವರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಹೇಮಾವತಿ ಬಲದಂಡೆ ನಾಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಚಂದಗೋಳಮ್ಮ ದೇವಾಲಯದ ಬಳಿಯಿರುವ ಹೇಮಾವತಿ ನಾಲೆಯಲ್ಲಿ ಘಟನೆ ನಡೆದಿದ್ದು, ನೀರು ಪಾಲಾದವರಿಗಾಗಿ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.