ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ ಕಲ್ಪಿಸಲು ಉದ್ದೇಶಿರುವುದರಿಂದ ಡಿಸೆಂಬರ್ 20, 21ರಂದು ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಮ್ಮೇಳನದಲ್ಲಿ ಅನುಕೂಲವಾಗುವಂತೆ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ರಜೆ ಅವಧಿಯನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಪಾಠ ಪ್ರವಚನ ನಡೆಸಿ ಸರಿದೂಗಿಸುವಂತೆ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.