ಮಂಡ್ಯ: ಮಗಳ ಮುಂದೆ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
50 ವರ್ಷದ ಪಾರ್ವತಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಮಗಳು ಅರ್ಪಿತಾ ಮುಂದೆ ತಾಯಿಯ ಕೊಲೆ ಮಾಡಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಮನೆ ದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಘಟನೆ ನಡೆದಿದೆ. ಅರ್ಧ ಕಿಲೋಮೀಟರ್ ವರೆಗೂ ಹಿಂಬಾಲಿಸಿಕೊಂಡು ಬಂದು ಕೊಲೆ ಮಾಡಲಾಗಿದೆ. ಪಾರ್ವತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.