alex Certify ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ.

ಮಂಡ್ಯ ಗಾಂಧಿನಗರದ 4ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ದುಷ್ಕರ್ಮಿಗಳು ಅಕ್ಷಯ್ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್ ಒಳಗೆ ನುಗ್ಗಿದರೂ ಬೆನ್ನಟ್ಟಿ ಹೋಗಿ ದಾಳಿ ಮಾಡಿದ್ದಾರೆ. ಹಳೆಯ ದ್ವೇಷಕ್ಕೆ ಅಕ್ಷಯ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊಲೆ ಮಾಡಿ ಪರಾರಿಯಾದ ಐವರು ಹಂತಕರಿಗಾಗಿ ಪೊಲೀಸರಿಂದ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...