
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ಬ್ಯಾಡರಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಗೆ ತಿಂಡಿ ಕೊಡಿಸುವ ಆಮಿಷ ತೋರಿಸಿ ವೃದ್ಧನೊಬ್ಬ ಅತ್ಯಾಚಾರ ಎಸೆಗಿದ್ದಾನೆ. 63 ವರ್ಷದ ವ್ಯಕ್ತಿ ಅದೇ ಗ್ರಾಮದ 15 ವರ್ಷದ ಬಾಲಕಿಗೆ ತಿಂಡಿ ಕೊಡಿಸುವುದಾಗಿ ಹಲಗೂರಿಗೆ ಕರೆದುಕೊಂಡು ಹೋಗಿ ಊಟ ಕೊಡಿಸಿದ್ದಾನೆ. ನಂತರ ಬಸವನಹಳ್ಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯ ಸಹೋದರಿ ಹಲಗೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.