alex Certify ಹೊಟ್ಟೆ ನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಮದುವೆ ನೆಪದಲ್ಲಿ ಲೈಂಗಿಕ ಸಂಪರ್ಕ ಬೆಳೆಸಿದ ಆಟೋ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆ ನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಮದುವೆ ನೆಪದಲ್ಲಿ ಲೈಂಗಿಕ ಸಂಪರ್ಕ ಬೆಳೆಸಿದ ಆಟೋ ಚಾಲಕ ಅರೆಸ್ಟ್

ಮಂಡ್ಯ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ 4 ತಿಂಗಳ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಕೆಆರ್ ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಲಕ್ಷ್ಮಣ(24) ಬಂಧಿತ ಆರೋಪಿಯಾಗಿದ್ದಾನೆ. ಆಟೋ ಚಾಲಕನಾಗಿರುವ ಲಕ್ಷ್ಮಣ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಮನೆಯವರಿಗೆ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಸಿದ್ದಾನೆ ಎನ್ನಲಾಗಿದೆ.

ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಆಕೆ ನಾಲ್ಕು ತಿಂಗಳ ಗರ್ಭಿಣಿ ಆಗಿರುವುದನ್ನು ತಿಳಿಸಿದ್ದಾರೆ. ನಂತರ ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...