ಮಂಡ್ಯ: ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಭೀಕರ ಬರಗಾಲ, ಲೋಕಸಭೆ, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಲಾಗಿತ್ತು. ನೀತಿ ಸಂಹಿತೆ ಅಂತ್ಯಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.