ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಅಧ್ಯಕ್ಷರು ಮುಂದಿನ ಸಮ್ಮೇಳನಕ್ಕೆ ಆತಿಥ್ಯ ವಹಿಸಲು ಆಸಕ್ತಿ ತೋರಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಹಾವೇರಿಯಲ್ಲಿ ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಈ ಬಗ್ಗೆ ಮಾತನಾಡಿ, 87 ನೇ ಸಾಹಿತ್ಯ ಸಮ್ಮೇಳನ ಸ್ಥಳದ ಬಗ್ಗೆ ಚರ್ಚೆ ನಡೆದು 46 ಮತದಾರರು ಮತ ಚಲಾವಣೆ ಮಾಡಿದರು. 17 ಮತಗಳು ಮಂಡ್ಯ ಜಿಲ್ಲೆಗೆ ಬಂದಿವೆ. ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದಿವೆ ಎಂದು ತಿಳಿಸಿದ್ದಾರೆ.