
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ಜೂನ್ 7, 8, 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಜೂನ್ 7, 8 ಮತ್ತು 9ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ತೀರ್ಮಾನ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಅರ್ಥಪೂರ್ಣವಾಗಿ ಕನ್ನಡ ಪರ ಸಂಘಟನೆಗಳನ್ನು ವಿಶ್ವಾಸಕ್ಕೆ ಪಡೆದು ಸಮ್ಮೇಳನ ಆಯೋಜಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ, 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಸಾಧಕರನ್ನು ಸನ್ಮಾನಿಸಲಾಗುವುದು. ಮೂರು ದಿನಗಳ ಕಾಲ ಕನ್ನಡ ವಿಚಾರಗೋಷ್ಠಿ, ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದು, ಸಮ್ಮೇಳನಕ್ಕೆ 30 ಕೋಟಿ ರೂ. ಅನುದಾನ ಒದಗಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.