
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶಿವರಾಂ ಬಂಧಿತ ಆರೋಪಿಯಾಗಿದ್ದು, ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸುವುದು, ಅಸಭ್ಯ ಭಾಷೆ ಬಳಸುವುದನ್ನು ಮಾಡುತ್ತಿದ್ದ ಎನ್ನಲಾಗಿದೆ.
ಅಲ್ಲದೆ ಕೆಲವೊಮ್ಮೆ ವಿದ್ಯಾರ್ಥಿನಿಯರನ್ನು ಬೈಕಿನಲ್ಲಿ ಈತ ಕರೆದೊಯ್ಯುತ್ತಿದ್ದು, ಈತನ ವರ್ತನೆಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದರೂ ಇದನ್ನು ಮುಂದುವರಿಸಿದ ಕಾರಣ ಮದ್ದೂರು ಪೊಲೀಸರ ಗಮನಕ್ಕೆ ತರಲಾಗಿತ್ತು. ಇದೀಗ ಶನಿವಾರದಂದು ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.