ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ಪೇಟೆ ಬೀದಿ ರೈಲ್ವೇ ಗೇಟ್ ಬಳಿ ಘಟನೆ ನಡೆದಿದೆ.
ಫೋನ್ ನಲ್ಲಿ ಮಾತನಾಡಿಕೊಂಡು ಹಳಿ ದಾಟುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ರೈಲು ಬರುತ್ತಿರುವುದನ್ನು ಗಮನಿಸದೇ ಫೋನ್ ನಲ್ಲಿ ಮಾತನಾಡುತ್ತಾ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಹಿಳೆಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.