ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಯಾವುದೇ ಟ್ರಾವಲ್ ಹಿಸ್ಟ್ರಿ ಇಲ್ಲದಿದ್ದರೂ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ವ್ಯಕ್ತಿಯ ಸಂಪರ್ಕದಲ್ಲಿರುವ ನಾಲ್ವರನ್ನೂ ಪರೀಕ್ಷಿಸಲಾಗಿದ್ದು ಬೇರಾರಿಗೂ ಸೋಂಕು ಹರಡಿಲ್ಲ ಎಂದು ತಿಳಿದುಬಂದಿದೆ.
ವ್ಯಕ್ತಿಗೆ ಹತ್ತು ದಿನಗಳ ಹಿಂದೆಯೇ ಕೋವಿಡ್ ಪಾಸಿಟಿವ್ ಬಂದಿತ್ತು. ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಇಂದು ಆತ ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮದ್ದೂರು ವ್ಯಕ್ತಿಯಲ್ಲಿ ಕಂಡುಬಂದಿರುವುದು ಕೇರಳದಲ್ಲಿ ಪತ್ತೆಯಾಗಿರುವ ಕೊರೊನಾ ರೂಪಾಂತರ ವೈರಸ್ ಅಲ್ಲ. ಕೋವಿಡ್ ಪಾಸಿಟಿವ್ ಬಂದಿತ್ತು ಎಂದು ತಿಳಿದುಬಂದಿದೆ.