ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ.
ನಾಲೆಗೆ ಬಿದ್ದಿರುವ ಕಾರಿನಲ್ಲಿ ನಾಲ್ವರು ಇರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ನಾಲೆಯಲ್ಲಿ ಇಳಿದು ಪರಿಶೀಲನೆ ನಡೆಸಿದ್ದಾರೆ.
ನಿನ್ನೆಯಷ್ಟೇ ಕೆ.ಆರ್.ಎಸ್ ನಿಂದ ನೀರು ಬಿಟ್ಟಿರುವುದರಿಂದ ವಿ.ಸಿ ನಾಲೆ ತುಂಬಿ ಹರಿಯುತ್ತಿದ್ದು, ಕಾರಿನಲ್ಲಿದ್ದವರ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.