alex Certify ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಮೇಲೆ ಪೊಲೀಸರ ತೀವ್ರ ನಿಗಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಮೇಲೆ ಪೊಲೀಸರ ತೀವ್ರ ನಿಗಾ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಅಪರಾಧ ಕೃತ್ಯಗಳು ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.

5 ವರ್ಷಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾದವರನ್ನು ಗುರುತಿಸಿ ಸಿ ಆರ್ ಇ ಸಿ ಸೆಕ್ಷನ್ 107 ಹಾಗೂ 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.

ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ 1200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ 1 ವರ್ಷದವರೆಗೆ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುತ್ತದೆ. ಒಂದು ವೇಳೆ ಮುಚ್ಚಳಿಕೆ ನಿಯಮ ಉಲ್ಲಂಘನೆ ಮಾಡಿದರೆ ಜಾಮೀನು ಮೊತ್ತ ಮುಟ್ಟುಗೋಲು ಹಾಕಿಕೊಂಡು ಮತ್ತೊಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...