alex Certify BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ.

ಹಾವೇರಿ ಮೂಲದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಚಂದ್ರಪ್ಪ, ಮಹಾಂತೇಶ, ರೇಗಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ.

ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾರ್ಮಿಕರಿಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೂ ಕಾರ್ ಡಿಕ್ಕಿ ಹೊಡೆದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...