ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಂಡ ಮಂಗಳೂರು ಹೊರವಲಯದ ಅಡ್ಯಾರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ.
ಕೇರಳ ಮೂಲದ ಇಂಜಿನಿಯರ್ ವಿದ್ಯಾರ್ಥಿ ಮೊಹಮ್ಮದ್ ನಶತ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಅತಿ ವೇಗವಾಗಿ ಬಂದ ಬೈಕ್ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ವಿದ್ಯುತ್ ಕಂಬಕ್ಕೆ ತಲೆ ಬಡಿದಿದೆ. ತಲೆ ಛಿದ್ರವಾಗಿ ಸ್ಥಳದಲ್ಲೇ ನಶತ್ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.