ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರನ್ನು ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿಯಾಗಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ವಿಚಾರಿಸಿದರು.
ಇದೇ ವೇಳೆ ಸಂತ್ರಸ್ತ ವಿದ್ಯಾರ್ಥಿನಿಯರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಆಯೋಗದ ಅದ್ಯಕ್ಷೆ ಡಾ.ನಾಗಲಕ್ಷ್ಮೀ, ಸಂತ್ರಸ್ತ ಯುವತಿಯರು ಪರೀಕ್ಷೆ ಬಗ್ಗೆ ಕೇಳುತ್ತಿದ್ದಾರೆ. ಅವುರು ತುಂಬಾ ಭಾವುಕವಾಗಿ ಮಾತನಾಡಿದ್ರು. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುತ್ತೇವೆ. ಆಸಿಡ್ ದಾಳಿಯಿಂದಾದ ಗಾಯದ ಗಂಭೀರತೆ ಮೇಲೆ ಚಿಕಿತ್ಸೆ ನಿರ್ಧಾರ ಆಗುತ್ತೆ ಎಂದು ಹೇಳಿದರು.