
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.
ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಲಿದ್ದಾರೆ.
ಆಟೋದಲ್ಲಿ ಕುಕ್ಕರ್ ಕಂಡು ಬಂದಿದೆ. ತನಿಖೆ ನಂತರ ನಿಗೂಢ ಸ್ಪೋಟದ ಹಿಂದಿನ ರಹಸ್ಯವೇನೆಂಬುದು ಗೊತ್ತಾಗಲಿದೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.