alex Certify BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಉಡುಪಿ ರಥಬೀದಿಯಲ್ಲಿ ಪೊಲೀಸರಿಂದ ಪರಿಶೀಲನೆ; ಸ್ಯಾಟಲೈಟ್ ಫೋನ್ ಆಕ್ಟೀವ್ ಗೂ ಇದೆಯಾ ಲಿಂಕ್….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಉಡುಪಿ ರಥಬೀದಿಯಲ್ಲಿ ಪೊಲೀಸರಿಂದ ಪರಿಶೀಲನೆ; ಸ್ಯಾಟಲೈಟ್ ಫೋನ್ ಆಕ್ಟೀವ್ ಗೂ ಇದೆಯಾ ಲಿಂಕ್….?

ಉಡುಪಿ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಕರಾವಳಿ ಜಿಲ್ಲೆಗಳ ವಿವಿಧೆಡೆಗಳಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದ್ದು, ದೇವಾಲಯಗಳೇ ಆತನ ಪ್ರಮುಖ ಟಾರ್ಗೆಟ್ ಆಗಿತ್ತು ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಶಂಕಿತ ಉಗ್ರ ಮೊಹಮ್ಮದ್ ಶಾರಿಕ್ ಉಡುಪಿಯಲ್ಲಿಯೂ ಓಡಾಟ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಉಡುಪಿಯ ರಥಬೀದಿಯ ಹಲವೆಡೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಕ್ಟೋಬರ್ 11ರಂದು ಉಡುಪಿಯ ಕೃಷ್ಣಮಠ ಹಾಗೂ ರಥಬೀದಿಯಲ್ಲಿ ಶಾರಿಕ್ ಸುತ್ತಾಡಿದ್ದ. ರಥಬೀದಿಯಿಂದ ಮಾಡಿದ್ದ ಮೊಬೈಲ್ ಕರೆಯೊಂದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಿದ್ದಾರೆ. ಮಾನಸಿಕ ಅಸ್ವಸ್ಥೆಯೊಬ್ಬರು ಶಾರಿಕ್ ನಿಂದ ಮೊಬೈಲ್ ಪಡೆದು ಕರೆ ಮಾಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಇನ್ನು ಮಂದಾರ್ತಿ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಒಂದು ಸಕ್ರಿಯವಾಗಿದ್ದ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಈ ನಿಟ್ಟಿನಲ್ಲಿಯೂ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...