ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಲಾನ್ ಮಾಡಿದ್ದ ಸ್ಥಳಕ್ಕೆ ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಫೋಟದ ವೇಳೆ ವಶಕ್ಕೆ ಪಡೆದ ವ್ಯಕ್ತಿಗೂ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆತನ ಬಳಿ ಹಿಂದೂ ವ್ಯಕ್ತಿಯ ಐಡಿ ಕಾರ್ಡ್, ಆಧಾರ್ ಕಾರ್ಡ್ ಪತ್ತೆಯಾಗಿದೆ.
ಸಧ್ಯ ಪತ್ತೆಯಾದ ಆಧಾರ್ ಕಾರ್ಡ್ ನಕಲಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.