
ಮಂಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಮಂಗಳೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ.
ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಮಂಗಳೂರು ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಎಂಪಿಎಲ್ ಸಂಸ್ಥೆಗೆ ಸೇರಿದ ಬಸ್ ಕಟೀಲು ದೇವಾಲಯದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುವಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಅದೇ ಮಾರ್ಗವಾಗಿ ತೆರಳುತ್ತಿದ್ದ ಟ್ಯಾಂಕರ್ ನಿಂದ ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ಬಸ್ ಚಾಲಕ ಮತ್ತು ಇಬ್ಬರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.