ಮಂಗಳೂರು ಕುಕ್ಕರ್ ಬಾಂಬ್ ಕಿಂಗ್ ಪಿನ್ ಬೆಳಗಾವಿ ಉಗ್ರ ಎಂದು NIA ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.
ಮಂಗಳೂರಿನಲ್ಲಿ 2022ರ ನ.19ರಂದು ಸಂಭವಿಸಿದ್ದ ‘ಕುಕ್ಕರ್ ಬಾ೦ಬ್’ ಸ್ಫೋಟ ಪ್ರಕರಣದ ‘ಮಾಸ್ತರ್ ಮೈಂಡ್” ಬೆಳಗಾವಿ ಜೈಲಿನಲ್ಲಿ ಬಂಧಿತನಾಗಿದ್ದ ಲಷ್ಕರ್ ಎ ತೊಯ್ದಾ ಸಂಘ ಸದಸ್ಯ ಎಂಬ ಸಂಗತಿಯನ್ನು ಎನ್ ಐ ಎ ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪಿ ಹಾಗೂ 2012ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಪಾಷಾ, ಕುಕ್ಕರ್ ಬಾಂಬ್ ಸ್ಫೋಟಿಸಿದ್ದನು. ಅಲ್ಲದೇ ಈತನ ಬ್ಯಾಂಕ್ ಖಾತೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ ಎಫ್ಐ) 5 ಲಕ್ಷರು, ವರ್ಗಾಯಿಸಿತ್ತು ಎ೦ದೂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2022ರ ನ.19ರಂದು ಮಂಗಳೂರಿನಲ್ಲಿ ಆಟೋವೊಂದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಆದರೆ ಆ ಘಟನೆ ಆಕಸ್ಮಿಕವಲ್ಲ, ಭಾರಿ ಅವಘಡ ನಡೆಸುವ ಉದ್ದೇಶದಿಂದಲೇ ನಡೆಸಲಾದ ಭಯೋತ್ಪಾದಕ ಕೃತ್ಯ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.