alex Certify BREAKING NEWS: ಬ್ಲಾಕ್ ಫಂಗಸ್, ಕೊರೋನಾ ಭಯದಿಂದ ಮಂಗಳೂರಲ್ಲಿ ದಂಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬ್ಲಾಕ್ ಫಂಗಸ್, ಕೊರೋನಾ ಭಯದಿಂದ ಮಂಗಳೂರಲ್ಲಿ ದಂಪತಿ ಆತ್ಮಹತ್ಯೆ

ಮಂಗಳೂರು: ಕೊರೋನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಚಿತ್ರಾಪುರದ ರಹೇಜಾ ಅಪಾರ್ಟ್ಮೆಂಟ್ನಲ್ಲಿ ರಮೇಶ್ ಕುಮಾರ್ ದಂಪತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಮೊದಲು ರಮೇಶ್ ಕುಮಾರ್ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿ ಕಾಲ್ ಕಟ್ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿದ ಸಂದರ್ಭದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಡೆತ್ ನೋಟ್ ನಲ್ಲಿ ಕೊರೊನಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬರೆದಿದ್ದಾರೆನ್ನಲಾಗಿದ್ದು, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...