ಮಂಗಳೂರು: ಬೆಳ್ತಂಗಡಿ ಬಳಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣವನ್ನು ಎನ್ ಐ ಎ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ.
ಪಟಾಕಿ ಗೋಡೌನ್ ನಲ್ಲಿ ಐದು ಬಾರಿ ಸ್ಫೋಟ ಸಂಭವಿಸಿದೆ. ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳು ಹಲವು ಅನುಮಾನಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಕರಣವನ್ನು ಎನ್ ಐ ಎ ತನಿಖೆಗೆ ವೈಸುವಂತೆ ಒತ್ತಾಯಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಘಟನಾ ಸ್ಥಳದಲ್ಲಿ ಬಾಂಬ್ ಮಾದರಿಯ ಹತ್ತಕ್ಕು ಹೆಚ್ಚು ವಸ್ತುಗಳು ಪತ್ತೆಯಾಗಿವೆ. ಇದು ಅನುಮಾನಕ್ಕೆ ಕಾರಣವಾಗಿದೆ. ಸ್ಫೋಟದ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಇನ್ನೊಂದೆಡೆಸಂಸದ ನಳೀನ್ ಕುಮಾರ್ ಕಟೀಲ್ ಕೂಡ ಬೆಳ್ತಂಗಡಿಯ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಸ್ಫೋಟದ ಸುತ್ತ ಹಲವಾರು ಅನುಮಾನಗಳಿವೆ. ಪ್ರಕರಣದ ಬಗ್ಗೆ ಎನ್ ಐ ಎ ತನಿಖೆ ನಡೆಸಲಿ ಎಂದು ಹೇಳಿದ್ದಾರೆ.
ಬೆಳ್ತಂಗಡಿಯ ವೇಣೂರು ಬಳಿಯ ಗೋಳಿಯಂಗಡಿ ಬಳಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರು.