ಮಂಗಳೂರು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಎಸ್ಡಿಪಿಐ ಹಾಗೂ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಐವರು ಪಿಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು ಗ್ರಾಮಾಂತರ, ಪಣಂಬೂರು, ಸುರತ್ಕಲ್, ಉಳ್ಳಾಲ ಸೇರಿ ಏಳೆಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ.