
ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಲಾಡ್ಜ್ ಮ್ಯಾನೇಜರ್ ಮತ್ತು ರೂಮ್ ಬಾಯ್ ಬಂಧಿತ ಆರೋಪಿಗಳು. ಇವರು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಹಾಗೂ ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.