
ಮಂಗಳೂರು: ಮಂಗಳೂರಿನ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
20 ವರ್ಷದ ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಹಾಸ್ಟೆಲ್ ಕಟ್ಟಡದಿಂದ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹತಾಶೆಯಿಂದ ಆತ್ಮಹತ್ಯೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಕದ್ರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.