
ಮಂಗಳೂರು: ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರವಾಗಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರು ಕುರಿತು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮೊಹಮ್ಮದ್ ಷಾರೀಕ್, ಮಾಝ್ ಮುನೀರ್ ಅಹಮ್ಮದ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ.