alex Certify ಹಠಾತ್ ಬ್ರೇಕ್ ಹಾಕಿದ ಚಾಲಕ: ಬಸ್ ನಿಂದ ಬಿದ್ದು ಚಕ್ರಕ್ಕೆ ಸಿಲುಕಿ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಠಾತ್ ಬ್ರೇಕ್ ಹಾಕಿದ ಚಾಲಕ: ಬಸ್ ನಿಂದ ಬಿದ್ದು ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಮಂಗಳೂರು: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಆಯತಪ್ಪಿದ ಮಹಿಳೆ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮಂಗಳೂರು ಸುರತ್ಕಲ್ ನ ಜೋಕಟ್ಟೆಯಲ್ಲಿ ಸೋಮವಾರ ಘಟನೆ ನಡೆದಿದೆ. ಉತ್ತರ ಕರ್ನಾಟಕದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ(65) ಮೃತಪಟ್ಟವರು ಎಂದು ಹೇಳಲಾಗಿದೆ. ಪುತ್ರಿಯೊಂದಿಗೆ ಖಾಸಗಿ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಚಾಲಕನ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಮುಗ್ಗರಿಸಿ ಬಸ್ ನಿಂದ ಹೊರಗೆ ಬಿದ್ದಿದ್ದಾರೆ. ಅವರ ತಲೆ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಸ್,  ಚಾಲಕನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...