
ಬೆಂಗಳೂರು: ಮಾವಿನ ಹಣ್ಣು ಕೀಳಲು ಹೋಗಿ ವ್ಯಕ್ತಿಯೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಹಾಡ್ಯಾಳು ಗ್ರಾಮದ ಸೋಮಶೇಖರ್ ಎಂಬುವವರ ತೋಟದಲ್ಲಿ ಈ ದುರಂತ ಸಂಭವಿಸಿದೆ. ಕಂಬಿಯಿಂದ ಮಾವಿನ ಹಣ್ಣು ಕೀಳುವಾಗ ಶೆಡ್ ಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಏಕಾಏಕಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವನ್ನಪ್ಪಿದ್ದಾನೆ.
ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.