alex Certify ಪೋಷಕಾಂಶಗಳ ನಿಧಿ ಮಾವಿನಕಾಯಿ; ಬೇಸಿಗೆಯಲ್ಲಿ ಆರೋಗ್ಯಕ್ಕೆ ಸಿಗುತ್ತೆ ದುಪ್ಪಟ್ಟು ಲಾಭ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕಾಂಶಗಳ ನಿಧಿ ಮಾವಿನಕಾಯಿ; ಬೇಸಿಗೆಯಲ್ಲಿ ಆರೋಗ್ಯಕ್ಕೆ ಸಿಗುತ್ತೆ ದುಪ್ಪಟ್ಟು ಲಾಭ….!

ಜನರು ಬೇಸಿಗೆಯಲ್ಲಿ ಮಾವಿನ ಹಣ್ಣನ್ನು ತುಂಬಾ ಇಷ್ಟಪಡುತ್ತಾರೆ. ಅದೇ ರೀತಿ ಮಾವಿನ ಕಾಯಿಯನ್ನು ಕೂಡ ಸೇವಿಸಲಾಗುತ್ತದೆ. ಹಸಿ ಮಾವಿನಕಾಯಿಯಿಂದ ಚಟ್ನಿ ಮತ್ತು ಉಪ್ಪಿನಕಾಯಿ ಮಾಡಿ ಸವಿಯುತ್ತಾರೆ. ಇದನ್ನು ಪ್ರತಿನಿತ್ಯ ತಿನ್ನುವುದರಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ.

ರೋಗನಿರೋಧಕ ಶಕ್ತಿ ಹೆಚ್ಚಳ

ಮಾವಿನಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ತಿನ್ನಲು ಕೂಡ ರುಚಿಕರವಾಗಿರುತ್ತದೆ. ಮಾವಿನಕಾಯಿ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುತ್ತದೆ. ಪ್ರತಿನಿತ್ಯ ಹಸಿ ಮಾವಿನಕಾಯಿ ತಿಂದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಲು ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಶಾಖದಿಂದ ರಕ್ಷಣೆ

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಫೈಬರ್, ಕ್ಯಾಲ್ಸಿಯಂ ಮತ್ತು ಇತರ ಹಲವು ರೀತಿಯ ಪೋಷಕಾಂಶಗಳು ಮಾವಿನಕಾಯಿಯಲ್ಲಿ ಕಂಡುಬರುತ್ತವೆ. ಬೇಸಿಗೆಯಲ್ಲಿ ಮಾವಿನಕಾಯಿ ಸೇವಿಸುವ ಮೂಲಕ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಬಹುದು. ಕೆಲವರು ಆಮ್‌ ಪನ್ನಾ ಮಾಡಿ ಕುಡಿಯುತ್ತಾರೆ. ಇದು ಸಹ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

ದೇಹದಲ್ಲಿ ನೀರಿನ ಕೊರತೆ

ಬೇಸಿಗೆಯಲ್ಲಿ ಹೊರಗೆ ಓಡಾಡುವ ಸಂದರ್ಭದಲ್ಲಿ ವಿಪರೀತ ಶಾಖದ ಅಲೆಯನ್ನು ಎದುರಿಸಬೇಕಾಗುತ್ತದೆ. ಶಾಖದ ಹೊಡೆತದಿಂದ ಪಾರಾಗಲು ಮಾವಿನಕಾಯಿ ತಿನ್ನುವುದು ಬಹಳ ಮುಖ್ಯ. ಇದರಲ್ಲಿರುವ ಗುಣಗಳು ದೇಹವನ್ನು ಶಾಖದಿಂದ ರಕ್ಷಿಸುತ್ತವೆ. ದೇಹವನ್ನು ತಂಪಾಗಿರಿಸಲು ಇದು ತುಂಬಾ ಪ್ರಯೋಜನಕಾರಿಯಾಗಿದೆ. ದೇಹದಲ್ಲಿ ನೀರಿನ ಕೊರತೆಯಿದ್ದರೆ ಅದನ್ನು ಸೇವಿಸಬೇಕು.

ಮೂಳೆಗಳನ್ನು ಬಲಪಡಿಸುತ್ತದೆ

ಪ್ರತಿದಿನ ಮಾವಿನಕಾಯಿ ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಇದು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಇದು ಬಹುಮುಖ್ಯ.

ರಕ್ತದೊತ್ತಡ

ಪ್ರತಿದಿನ ಸುಮಾರು 100 ಗ್ರಾಂನಷ್ಟು ಮಾವಿನಕಾಯಿಯನ್ನು ಮಾತ್ರ ಸೇವನೆ ಮಾಡಬೇಕು. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬಾರದು. ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು ವೈದ್ಯರನ್ನು ಸಂಪರ್ಕಿಸಿದ ನಂತರವೇ ಸೇವಿಸಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಾಯಕವಾಗಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...