ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ.
ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದು ಹೇಳಲಾಗಿದೆ.