ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಪಾಲ ಅನುಸೂಯಿಯಾ ಉಕೆ ಅವರನ್ನು ಮಧ್ಯಾಹ್ನ 1:00 ಗಂಟೆಗೆ ಭೇಟಿಯಾಗಲಿರುವ ಬಿರೇನ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.
ಇದರ ಮಧ್ಯೆ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ರಾಜಭವನದ ಮುಂದೆ ನೆರೆದಿದ್ದು, ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.