ಬೆಂಗಳೂರು : ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ರಾಜಕೀಯ ಪಕ್ಷಗಳ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ಅಲ್ಲಿ ಮಣಿಪುರದಲ್ಲಿ ಮಹಿಳೆಯರ ಮೇಲೆ ರೇಪ್ ಆಗಿ ಮಣಿಪುರ ಹೊತ್ತಿ ಉರಿಯುತ್ತಿದೆ. ನೀವು ಇಲ್ಲಿ ಕ್ಯಾಮರಾ ಅಂತಿದ್ದೀರಾ..ಮಣಿಪುರದ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಉಡುಪಿ ವಿಡಿಯೋ ವಿಚಾರಕ್ಕೆ ಇಬ್ರಾಹಿಂ ಕಿಡಿಕಾರಿದ್ದಾರೆ. ಭಯೋತ್ಪಾದನೆ ಶುರುವಾಗುತ್ತಿದೆ ಎನ್ನುವುದು ಅವರಿಗೆ ಚುನಾವಣೆ ವಿಷಯ, ಕಾಂಗ್ರೆಸ್, ಬಿಜೆಪಿಯವರು ನಮ್ಮನ್ನು ತೋರಿಸಿ ವೋಟ್ ಪಡೆದರು ಎಂದು ಇಬ್ರಾಹಿಂ ಕಿಡಿಕಾರಿದರು.
ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ವಿಡಿಯೋ ಚಿತ್ರೀಕರಣ ಸಂಬಂಧ ಉಡುಪಿ ಕೋರ್ಟ್ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದೆ.