
ಮಣಿಪುರದ ನರಂಸೇನಾ ಪ್ರದೇಶದಲ್ಲಿ ತಡರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.
ದಾಳಿಯು ಮಧ್ಯರಾತ್ರಿ ಪ್ರಾರಂಭವಾಯಿತು ಮತ್ತು ಈ ಪ್ರದೇಶದಲ್ಲಿ 2:15 ರವರೆಗೆ ಮುಂದುವರೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ನ ಸಿಬ್ಬಂದಿಗಳು ರಾಜ್ಯದ ಬಿಷ್ಣುಪುರ ಜಿಲ್ಲೆಯ ನರನ್ಸೇನಾ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಕುಕಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.